ನಿ ರೂಪಕಿ ಅನುಶ್ರೀ ಅವರು ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿ ಇರುವ ರೆಸಾರ್ಟ್ನಲ್ಲಿ ಅನುಶ್ರೀ ಅವರ ಮದುವೆ ನಡೆಯಲಿದೆ. ತುಂಬಾ ಸರಳವಾಗಿರುವ ಅವರ ವಿವಾಹ ಆಮಂತ್ರಣ ಪತ್ರಿಕೆಯ ಫೋಟೋ ಲಭ್ಯವಾಗಿದೆ. ಅನೇಕ ಸೆಲೆಬ್ರಿಟಿಗಳು ಅನುಶ್ರೀ ಮದುವೆಗೆ ಸಾಕ್ಷಿಯಾಗಲಿದ್ದಾರೆ. ಈ ಬಗ್ಗೆ ಕೆಲವೇ ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. . ಕೊಡಗು ಮೂಲದ ರೋಷನ್ ಜೊತೆ ಆ್ಯಂಕರ್ ಅನುಶ್ರೀ ಅವರು ಹಸೆಮಣೆ ಏರಲಿದ್ದಾರೆ. ಮದುವೆಗೆ ದಿನಾಂಕ ಕೂಡ ನಿಗದಿ ಆಗಿದೆ. ಆಗಸ್ಟ್ 28ರಂದು ಅನುಶ್ರೀ ಮತ್ತು ರೋಷನ್ ಅವರ ಮದುವೆ ನಡೆಯಲಿದೆ. ಈಗಾಗಲೇ ಆಪ್ತರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಲಾಗಿದೆ. ಅನುಶ್ರೀ ಮದುವೆಯ ಆಹ್ವಾನ ಪತ್ರಿಕೆ ತುಂಬಾ ಸರಳವಾಗಿದೆ. ‘ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ’ ಎಂದು ಆಹ್ವಾನ ಪತ್ರಿಕೆಯಲ್ಲಿ ಬರೆಯಲಾಗಿದೆ. ಆ.28ಕ್ಕೆ ರೋಷನ್ ಜೊತೆ ನಿರೂಪಕಿ ಅನುಶ್ರೀ ಸಪ್ತಪದಿ ತುಳಿಯಲಿದ್ದಾರೆ. ಅಂದು ಬೆಳಗ್ಗೆ 10.56ಕ್ಕೆ ಮಾಂಗಲ್ಯ ಧಾರಣೆ ಆಗಲಿದೆ. ಬೆಂಗಳೂರಿನ ಹೊರವಲಯದ ರೆಸಾರ್ಟ್ನಲ್ಲಿ ಮದುವೆ ನಡೆಯಲಿದೆ. ಬಣ್ಣದ ಲೋಕದಲ್ಲಿ ಅನುಶ್ರೀ ಅವರು ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಕಿರುತೆರೆಯ ಅನೇ...