ಬೆಟ್ಟಿಂಗ್ ಆಪ್ ಗಳಲ್ಲಿ ಹಣ ಹಾಕಿ ಯುವ ಜನತೆ ನಷ್ಟಕ್ಕೆ ತುತ್ತಾಗಿದ್ದಾರೆ . ಈ ಆಪ್ ನಲ್ಲಿ ಹಣ ಕಳೆದುಕೊಂಡು ಹಲವು ಯುವಕರು ಆತ್ಮಹತ್ಯೆಗೆ ಶರಣಾಗಿದ್ದಾರೆ . ಹೈದರಾಬಾದ್ : ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ನಟ ಪ್ರಕಾಶ್ ರಾಜ್ , ವಿಜಯ್ ದೇವರಕೊಂಡ , ರಾಣಾ ದಗ್ಗುಬಾಟಿ , ಸೇರಿದಂತೆ ಟಾಲಿವುಡ್ ' ನ 25 ಕ್ಕೂ ಹೆಚ್ಚು ನಟ - ನಟಿಯರ ವಿರುದ್ಧ ಪ್ರಕರಣ ದಾಖಲಾಗಿದೆ . ಸಾಮಾಜಿಕ ಹೋರಾಟಗಾರ ಫಣೀಂದ್ರ ಶರ್ಮಾ ಎಂಬುವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಹೈದರಾಬಾದ್ ನ ಮಿಯಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ . ಟಾಲಿವುಡ್ ' ನ ಹಲವು ನಟ - ನಟಿಯರು ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತನ್ನು ನೀಡುವ ಮೂಲಕ ಬೆಟ್ಟಿಂಗ್ ಆ್ಯಪ್ ' ನ್ನು ಪ್ರಚಾರ ಮಾಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ . ಬೆಟ್ಟಿಂಗ್ ಆಪ್ ಗಳಲ್ಲಿ ಹಣ ಹಾಕಿ ಯುವ ಜನತೆ ನಷ್ಟಕ್ಕೆ ತುತ್ತಾಗಿದ್ದಾರೆ . ಈ ಆಪ್ ನಲ್ಲಿ ಹಣ ಕಳೆದುಕೊಂಡು ಹಲವು ಯುವಕರು ಆತ್ಮಹತ್ಯೆಗೆ ಶರಣಾಗಿದ್ದಾರೆ . ಬೆಟ್ಟಿಂಗ್ ಆಪ್ ಪ್ರಚಾರಕ್ಕೆ ತೆಲಂಗಾಣ ಸರ್ಕಾರ ಈಗಾಗಲೇ ನಿಷೇಧ ಹೇರಿದೆ . ಇದರ ಹೊರತಾಗಿಯೂ ಬೆಟ್ಟಿಂ ಗ್ಆಪ್ ಪರ ಪ್ರಚಾರ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ . ಅಪ್ಲಿಕೇಶನ್ ಸ್ಟೋ...