ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

Cricket ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

4th T20I: ಇತಿಹಾಸ ಬರೆದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ; ಆಸಿಸ್ ದಾಖಲೆಯೂ ಧ್ವಂಸ!

ಈ ತರ ಮಾಹಿತಿ ತಿಳಿಯಲು ವಾಟ್ಸಾಪ್ ಗ್ರೂಪ್ ಜಾಯಿನ್ ಆಗಿ. ತಿರುವುನಂತಪುರಂ: ಪ್ರವಾಸಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ 4ನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಜೋಡಿ ಐತಿಹಾಸಿಕ ದಾಖಲೆ ನಿರ್ಮಿಸಿದೆ. ಕೇರಳದ ತಿರುವನಂತಪುರಂನಲ್ಲಿರುವ ಗ್ರೀನ್ ಫೀಲ್ಡ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ಇಂದು ನಡೆಯುತ್ತಿರುವ 4ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತೆಯರು 221 ರನ್ ಗಳಿಸಿ ಶ್ರೀಲಂಕಾಗೆ ಗೆಲ್ಲಲು 222 ರನ್ ಗಳ ಬೃಹತ್ ಗುರಿ ನೀಡಿದೆ. ಈ ಪಂದ್ಯದಲ್ಲಿ ಭಾರತದ ಆರಂಭಿಕ ಜೋಡಿ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಜೋಡಿ ಆರಂಭದಿಂದಲೇ ಶ್ರೀಲಂಕಾ ಬೌಲರ್ ಗಳ ಮೇಲೆ ಸವಾರಿ ಮಾಡಿತು. ಈ ಜೋಡಿ ಭಾರತಕ್ಕೆ ಸ್ಫೋಟಕ ಆರಂಭ ನೀಡಿತು. ಮೊದಲ ವಿಕೆಟ್ ಗೆ ಈ ಜೋಡಿ ದಾಖಲೆಯ 162 ರನ್ ಜೊತೆಯಾಟ ನೀಡಿತು. ಸ್ಮೃತಿ ಮಂಧಾನ 48 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 11 ಬೌಂಡರಿಗಳ ನೆರವಿನಿಂದ 80 ರನ್ ಚಚ್ಚಿದರೆ, ಮತ್ತೊಂದು ತುದಿಯಲ್ಲಿ ಅವರಿಗೆ ಸ್ಪರ್ಧೆ ನೀಡುತ್ತಿದ್ದ ಶಫಾಲಿ ವರ್ಮಾ ಕೂಡ 46 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 12 ಬೌಂಡರಿಗಳ ನೆರವಿನಿಂದ 79 ರನ್ ಕಲೆಹಾಕಿದರು. ಇತಿಹಾಸ ಬರೆದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಈ ಸ್ಫೋಟಕ ಬ್ಯಾಟಿಂಗ್ ಮೂಲಕ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಈ ಜೋಡಿ ಇಂದು ಮೊ...

ಏಷ್ಯಾಕಪ್ ಗೆಲುವಿನ ಬಳಿಕ 'ಪಾಕ್'ಗೆ ಶೇಕ್'ಹ್ಯಾಂಡ್ ಕೊಡಲು ನಿರಾಕರಿಸಿದ 'ಟೀಮ್ ಇಂಡಿಯಾ' : ವೀಡಿಯೋ ವೈರಲ್

ಭಾನುವಾರ ನಡೆದ ಏಷ್ಯಾ ಕಪ್ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. 128 ರನ್ಗಳ ಅಲ್ಪ ಮೊತ್ತವನ್ನು ಬೆನ್ನಟ್ಟಿದ ನಾಯಕ ಸೂರ್ಯಕುಮಾರ್ ಯಾದವ್ ಅಜೇಯ 47 ರನ್ ಗಳಿಸಿ ಗರಿಷ್ಠ ಸ್ಕೋರರ್ ಆಗಿದ್ದರು. ಭಾರತ ಇನ್ನೂ 4.1 ಓವರ್ಗಳು ಬಾಕಿ ಇರುವಾಗಲೇ ಪಂದ್ಯವನ್ನು ಗೆದ್ದುಕೊಂಡಿತು. ದುಬೈನಲ್ಲಿ ನಡೆದ ಪಂದ್ಯ ಮುಗಿದ ನಂತರ ಆಟಗಾರರು ಪರಸ್ಪರ ಮಾತನಾಡಲಿಲ್ಲ ಅಥವಾ ಕೈಕುಲುಕಲಿಲ್ಲ. ಸಾಮಾನ್ಯವಾಗಿ, ಕ್ರಿಕೆಟ್ ಪಂದ್ಯ ಮುಗಿದ ನಂತರ ಎರಡೂ ತಂಡಗಳ ಆಟಗಾರರು ಕೈಕುಲುಕುತ್ತಾರೆ ಮತ್ತು ಚರ್ಚೆಗಳಲ್ಲಿ ತೊಡಗುತ್ತಾರೆ. ಆದರೆ ಭಾನುವಾರ, ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನಿ ಆಟಗಾರರು ನೇರವಾಗಿ ತಮ್ಮ ಡ್ರೆಸ್ಸಿಂಗ್ ಕೋಣೆಗಳಿಗೆ ಹೋದರು. ಸೂರ್ಯಕುಮಾರ್ ಯಾದವ್ ಸುಫಿಯಾನ್ ಮುಖೀಮ್ ಎಸೆತವನ್ನು ಸಿಕ್ಸರ್ ಬಾರಿಸುವ ಮೂಲಕ ಆಟವನ್ನು ಮುಗಿಸಿದರು, ಅವರ ಪಾಲುದಾರ ಶಿವಂ ದುಬೆ ಅವರನ್ನು ಕರೆದು ಸದ್ದಿಲ್ಲದೆ ಡ್ರೆಸ್ಸಿಂಗ್ ಕೋಣೆಗೆ ನಡೆದರು. ಭಾರತದ ವರ್ತನೆಯಿಂದ ಪಾಕಿಸ್ತಾನದ ಮುಖ್ಯ ಕೋಚ್ ಮೈಕ್ ಹೆಸ್ಸನ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪಾಕ್ ಗೆ ಹಾಗೆ ಮಾಡಬೇಕು ಎಂದು ನೆಟ್ಟಗರು ಕಮೆಂಟ್ ಮಾಡಿದ್ದಾರೆ.