ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

Karnataka ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

WPL 2026 Final: ಮತ್ತೊಮ್ಮೆ ಡೆಲ್ಲಿ ಧೂಳೀಪಟ; ದಾಖಲೆಯ ಚೇಸ್ ಮಾಡಿ ಗೆದ್ದು ಎರಡನೇ ಬಾರಿ ಟ್ರೋಫಿ ಎತ್ತಿಹಿಡಿದ ಆರ್‌ಸಿಬಿ

ವಡೋದರಾದ ಕೊತಾಂಬಿ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿ ಎರಡನೇ ಬಾರಿಗೆ ಟ್ರೋಫಿ ಎತ್ತಿ ಹಿಡಿದಿದೆ. ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ಆರಿಸಿಕೊಂಡಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 203 ರನ್ ಕಲೆಹಾಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 204 ರನ್‌ಗಳ ಗುರಿಯನ್ನು ನೀಡಿದೆ. ಈ ಗುರಿಯನ್ನು ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 19.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್ ಕಲೆಹಾಕಿ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಫೈನಲ್‌ನಲ್ಲಿ ಅತಿದೊಡ್ಡ ಚೇಸ್ ಮಾಡಿದ ದಾಖಲೆ ಬರೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್: ತಂಡದ ಪರ ಲಿಜೆಲ್ ಲೀ ಹಾಗೂ ಶಫಾಲಿ ವರ್ಮಾ 49 ರನ್ ಜತೆಯಾಟವಾಡಿದರು. ಲಿಜೆಲ್ ಲೀ 37 ರನ್ ಗಳಿಸಿದರೆ, ಶಫಾಲಿ ವರ್ಮಾ 20 ರನ್ ಬಾರಿಸಿದರು. ಇನ್ನುಳಿದಂತೆ ನಾಯಕಿ ಜೆಮಿಮಾ ರೊಡ್ರಿಗಸ್ 57 ರನ್ ಬಾರಿಸಿದರೆ, ಅಂತಿಮ 19ನೇ ಓವರ್‌ನಲ್ಲಿ ನಾಲ್ಕು ಬೌಂಡರಿ ಹಾಗೂ ಒಂದು ಸಿಕ್ಸರ್ ಸಿಡಿಸಿದ ಶಿನೆಲ್ ಹೆನ್ರಿ 15 ಎಸೆತಗಳಲ್ಲಿ ಅಜೇಯ 35 ರನ್ ಬಾ...

ಬೆಂಗಳೂರು ಮೆಟ್ರೋ ದರ ಏರಿಕೆ ಫೆಬ್ರವರಿ 9 ರಿಂದ ಫಿಕ್ಸ್: ಇಲ್ಲಿದೆ ಪರಿಷ್ಕೃತ ದರ ಪಟ್ಟಿ

ಬೆಂಗಳೂರು: ಬಿಎಂಆರ್‌ಸಿಎಲ್ ನಿರೀಕ್ಷೆಯಂತೆ ಮತ್ತೆ ಮೆಟ್ರೋ ದರ ಏರಿಕೆಯಾಗಿದೆ. ಈ ಹೊಸ ದರಗಳ ಫೆಬ್ರವರಿ 9, 2026 ರಿಂದ ಜಾರಿಗೆ ಬರಲಿದೆ. ಪ್ರತೀವರ್ಷ ಸ್ವಯಂಚಾಲಿತವಾಗಿ ಈ ದರ ಪರಿಷ್ಕರಣೆಗೆ "ದರ ನಿಗದಿ ಸಮಿತಿ -(FFC) ಮಾಡಿದ ಶಿಫಾರಸ್ಸಿನಂತೆ ಟಿಕೆಟ್ ದರದಲ್ಲಿ ಏರಿಕೆ ಮಾಡಲಾಗ್ತಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. 96.10 ಕಿಮೀಗಳ ಸಂಪೂರ್ಣ ಜಾಲದಲ್ಲಿರುವ 10 ದರ ವಲಯಗಳಲ್ಲಿ ಕನಿಷ್ಠ ರೂ.1 ಮತ್ತು ಗರಿಷ್ಠ ರೂ.5 ರಷ್ಟು ಹೆಚ್ಚಳವಾಗಿದೆ. ವಲಯ ಅಂತರ (km) ಪ್ರಸ್ತುತ ದರ ಪರಿಷ್ಕೃತ ದರ F1 0-2 10 ರೂ 11 ರೂ F2 2-4 20 ರೂ 21 ರೂ F3 4-6 30 ರೂ 32 ರೂ F4 6-8 40ರೂ 42 ರೂ F5 8-10 50 ರೂ 53 ರೂ F6 10-15 60 ರೂ 63 ರೂ F7 15-20 70 ರೂ 74 ರೂ F8 20-25 80 ರೂ 84 ರೂ F9 25-30 90 ರೂ 95 ರೂ F10 30> 90 ರೂ 95 ರೂ ರಿಯಾಯಿತಿ ಮುಂದುವರಿಕೆ ಬಿಎಂಆರ್‌ಸಿಎಲ್ ಸ್ಮಾರ್ಟ್-ಕಾರ್ಡ್/NCMC ಬಳಕೆದಾರರಿಗೆ ಅಸ್ತಿತ್ವದಲ್ಲಿರುವ ಎಲ್ಲಾ ರಿಯಾಯಿತಿಗಳ ಮುಂದುವರಿಕೆ • ಪೀಕ್ ಸಮಯದಲ್ಲಿ ಶೇ 5 ರಿಯಾಯಿತಿ, • ಪೀಕ್ ಅಲ್ಲದ ಸಮಯದಲ್ಲಿ ಶೇ 10 ರಿಯಾಯಿತಿ, • ಭಾನುವಾರ ಮತ್ತು ಮೂರು ಗೊತ್ತುಪಡಿಸಿದ ರಾಷ್ಟ್ರೀಯ ರಜಾದಿನಗಳಲ್ಲಿ ಶೇ 10 ರಿಯಾಯಿತಿ. ಮಾನ್ಯತೆ ಪ್ರಸ್ತುತದರ (ರೂ.) ಪರಿಷ್ಕೃತದರ (ರೂ.) ಸ್ಮಾರ್ಟ್ ಕಾರ್ಡ್ ಮೊಬೈಲ್ ಕ್ಯೂಆರ್‌ ಸ್ಮಾರ್ಟ್ ಕಾರ್ಡ್ ಮೊಬೈಲ್ ಕ್ಯೂಆರ್ ಒಂದು ದಿನ 300 250 313 263...

BREAKING : ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬಾಂಬ್ ಬೆದರಿಕೆ ಸಂದೇಶ ಪ್ರಕರಣಗಳು ಹೆಚ್ಚುತ್ತಿದೆ. ಇದೀಗ ನಗರದ ಶಾಂತಿನಗರದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ (Consulate General of Italy) ಅನಾಮಧೇಯ ವ್ಯಕ್ತಿಯೊಬ್ಬ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ. ಇಟಲಿಯ ಕಾನ್ಸುಲ್ ಜನರಲ್ ಕಚೇರಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ.ರಾಯಭಾರಿ ಕಚೇರಿಯ ಇಮೇಲ್ ಗೆ ಈ ಬೆದರಿಕೆ ಬಂದಿದೆ ಎಂದು ತಿಳಿದುಬಂದಿದೆ. ಕಚೇರಿ ಆವರಣದಲ್ಲಿ 5 ಆರ್ ಡಿ ಎಕ್ಸ್ ಬಾಂವ್ ಸ್ಪೋಟಿಸುವುದಾಗಿ ದುಷ್ಕರ್ಮಿಗಳು ಎಚ್ಚರಿಕೆ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಬಾಂಬ್ ಪತ್ತೆ ದಳ (BDDS) ಇಡೀ ಪ್ರದೇಶವನ್ನು ತಪಾಸಣೆ ನಡೆಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಯಭಾರಿ ಕಚೇರಿಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಕಚೇರಿಯ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿ, ಶೋಧ ಕಾರ್ಯ ಮುಂದುವರಿಸಲಾಗಿದೆ. ಈ ಬೆದರಿಕೆ ಕರೆ ಎಲ್ಲಿಂದ ಬಂತು? ಇದರ ಹಿಂದೆ ಯಾರಿದ್ದಾರೆ? ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನಾಲ್ಕು ದಿನಕ್ಕೆ 'ಮಾರ್ಕ್', '45' ಮಾಡಿದ ಕಲೆಕ್ಷನ್ ಎಷ್ಟು ಕೋಟಿ?

ಕನ್ನಡ ಸಿನಿ ಪ್ರಿಯರಿಗೆ ಡಿಸೆಂಬರ್ ತಿಂಗಳು ಸುಗ್ಗಿಯ ಸಮಯ. ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಡಿಸೆಂಬರ್ 11ರಂದು ರಿಲೀಸ್ ಆಯಿತು. ಈ ಚಿತ್ರ ರಿಲೀಸ್ ಆದ ಎರಡು ವಾರಗಳ ಬಳಿಕ '45' ಹಾಗೂ 'ಮಾರ್ಕ್' ಸಿನಿಮಾ (Mark Movie) ತೆರೆಗೆ (ಡಿಸೆಂಬರ್ 25) ಬಂದವು. ಎರಡೂ ಸಿನಿಮಾಗಳು ಒಂದೇ ದಿನ ರಿಲೀಸ್ ಆಗಿವೆ. ಈ ಚಿತ್ರಗಳ ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂಬ ಬಗ್ಗೆ ಇಲ್ಲಿದೆ ವಿವರ. 'ಮಾರ್ಕ್' ಸಿನಿಮಾದಲ್ಲಿ ಸುದೀಪ್ ನಟಿಸಿದ್ದಾರೆ. ಈ ಚಿತ್ರದಲ್ಲಿ ತಮಿಳಿನ ಅನೇಕ ಕಲಾವಿದರು ಅಭಿನಯಿಸಿದ್ದಾರೆ. ಈ ಸಿನಿಮಾ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬಂದಿದೆ. ವಿಜಯ್ ಕಾರ್ತಿಕೇಯ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ 'ಮಾರ್ಕ್' ಶೇಡ್​​ನಲ್ಲಿಯೇ ಮೂಡಿ ಬಂದಿದೆ ಎಂಬ ಮಾತಿದೆ. ಈ ಚಿತ್ರವನ್ನು ಜನರು ಇಷ್ಟಪಟ್ಟಿದ್ದಾರೆ. ಈ ಸಿನಿಮಾ ಕಲೆಕ್ಷನ್ ಬಗ್ಗೆ sacnilk ವರದಿ ಮಾಡಿದೆ. ಇದರ ವರದಿ ಪ್ರಕಾರ ಸಿನಿಮಾದ ಒಟ್ಟೂ ಕಲೆಕ್ಷನ್ 18.50 ಕೋಟಿ ರೂಪಾಯಿ ಆಗಿದೆ. ಮೊದಲ ದಿನ ಈ ಚಿತ್ರ 8.6 ಕೋಟಿ ರೂಪಾಯಿ (sacnilk ವರದಿ ಪ್ರಕಾರ), ಎರಡು, ಮೂರು ಹಾಗೂ ನಾಲ್ಕನೇ ದಿನ ಸಿನಿಮಾ ಸರಾಸರಿ 3.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಕಲೆಕ್ಷನ್ 18.5 ಕೋಟಿ ರೂಪಾಯಿ ಆಗಿದೆ. ಗ್ರಾಸ್ ಕಲೆಕ್ಷನ್ 22 ಕೋಟಿ ರೂಪಾಯಿ ಆಗಿದೆ. ಇನ್ನು, '45' ಸಿನಿಮ...

Saalumarada Thimmakka No More: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

ಈ ತರ ಮಾಹಿತಿ ತಿಳಿಯಲು ವಾಟ್ಸಾಪ್ ಗ್ರೂಪ್ ಜಾಯಿನ್ ಹಾಗಿ. ಸಾರಾಂಶ ಕನ್ನಡ ನಾಡಿನ ಹೆಮ್ಮೆಯ ಸಾಧಕಿ ಪದ್ಮ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ನವೆಂಬರ್ 2ರಿಂದ ಜಯನಗರ ಅಪೊಲೋ‌ ಆಸ್ಪತ್ರೆಯಲ್ಲಿ ತಿಮ್ಮಕ್ಕ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಬೆಂಗಳೂರು: ಕನ್ನಡ ನಾಡಿನ ಹೆಮ್ಮೆಯ ಸಾಧಕಿ ಪದ್ಮ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ನವೆಂಬರ್ 2ರಿಂದ ಜಯನಗರ ಅಪೊಲೋ‌ ಆಸ್ಪತ್ರೆಯಲ್ಲಿ ತಿಮ್ಮಕ್ಕ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು.