WPL 2026 Final: ಮತ್ತೊಮ್ಮೆ ಡೆಲ್ಲಿ ಧೂಳೀಪಟ; ದಾಖಲೆಯ ಚೇಸ್ ಮಾಡಿ ಗೆದ್ದು ಎರಡನೇ ಬಾರಿ ಟ್ರೋಫಿ ಎತ್ತಿಹಿಡಿದ ಆರ್‌ಸಿಬಿ
ವಡೋದರಾದ ಕೊತಾಂಬಿ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿ ಎರಡನೇ ಬಾರಿಗೆ ಟ್ರೋಫಿ ಎತ್ತಿ ಹಿಡಿದಿದೆ. ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ಆರಿಸಿಕೊಂಡಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 203 ರನ್ ಕಲೆಹಾಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 204 ರನ್‌ಗಳ ಗುರಿಯನ್ನು ನೀಡಿದೆ. ಈ ಗುರಿಯನ್ನು ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 19.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್ ಕಲೆಹಾಕಿ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಫೈನಲ್‌ನಲ್ಲಿ ಅತಿದೊಡ್ಡ ಚೇಸ್ ಮಾಡಿದ ದಾಖಲೆ ಬರೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್: ತಂಡದ ಪರ ಲಿಜೆಲ್ ಲೀ ಹಾಗೂ ಶಫಾಲಿ ವರ್ಮಾ 49 ರನ್ ಜತೆಯಾಟವಾಡಿದರು. ಲಿಜೆಲ್ ಲೀ 37 ರನ್ ಗಳಿಸಿದರೆ, ಶಫಾಲಿ ವರ್ಮಾ 20 ರನ್ ಬಾರಿಸಿದರು. ಇನ್ನುಳಿದಂತೆ ನಾಯಕಿ ಜೆಮಿಮಾ ರೊಡ್ರಿಗಸ್ 57 ರನ್ ಬಾರಿಸಿದರೆ, ಅಂತಿಮ 19ನೇ ಓವರ್‌ನಲ್ಲಿ ನಾಲ್ಕು ಬೌಂಡರಿ ಹಾಗೂ ಒಂದು ಸಿಕ್ಸರ್ ಸಿಡಿಸಿದ ಶಿನೆಲ್ ಹೆನ್ರಿ 15 ಎಸೆತಗಳಲ್ಲಿ ಅಜೇಯ 35 ರನ್ ಬಾ...