ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ಈ ಸಂದರ್ಭದಲ್ಲಿ ಸಿನಿಮಾ ಟಿಕೆಟ್ ದರದ ಬಗ್ಗೆ ಮಲ್ಟಿಪ್ಲೆಕ್ಸ್ ಒಕ್ಕೂಟ ತಕರಾರು ತೆಗೆದಿದೆ. ಸರ್ಕಾರ ನಿಗದಿ ಮಾಡಿರುವ 200 ರೂಪಾಯಿ ಟಿಕೆಟ್ ದರವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.. ಕರ್ನಾಟಕದಲ್ಲಿ 200 ರೂಪಾಯಿ ಸಿನಿಮಾ ಟಿಕೆಟ್ ದರ (Movie Ticket Price) ನಿಗದಿ ಮಾಡಲಾಗಿದೆ. ಈ ಮೊದಲು ಇದ್ದ ದುಬಾರಿ ಟಿಕೆಟ್ ಬೆಲೆಗೆ ಕಡಿವಾಣ ಹಾಕಲು ಈ ಆದೇಶ ನೀಡಲಾಗಿದೆ. ಇತ್ತೀಚೆಗೆ ಈ ನಿಯಮ ಜಾರಿಗೆ ಬಂದಿದೆ. ಇದರಿಂದಾಗಿ ಪ್ರೇಕ್ಷಕರಿಗೆ ಅನುಕೂಲ ಆಗಲಿದೆ. ಆದರೆ ಕೆಲವರು ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಮಲ್ಟಿಪ್ಲೆಕ್ಸ್ ಒಕ್ಕೂಟವು (Multiplex Association) ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. ‘ಹೊಂಬಾಳೆ ಫಿಲ್ಮ್ಸ್’ ನಿರ್ಮಾಣ ಮಾಡಿರುವ ‘ಕಾಂತಾರ: ಚಾಪ್ಟರ್ 1’ ( Kantara Chapter 1 ) ಸಿನಿಮಾದ ಬಿಡುಗಡೆಗೂ ಮುನ್ನ ಈ ಬೆಳವಣಿಗೆ ನಡೆದಿದೆ. ಸೆಪ್ಟೆಂಬರ್ 16ರಂದು ಈ ಅರ್ಜಿಯ ವಿಚಾರಣೆ ನಡೆಯಲಿದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಅಕ್ಟೋಬರ್ 2ರಂದು ಈ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಸಿನಿಮಾ ಟಿಕೆಟ್ ದರ ಕಡಿಮೆ ಮಾಡಿರುವುದರಿಂದ ಕಲೆಕ್ಷನ್ ಕಡಿಮೆ ಆಗುವ ಸಾಧ್ಯತೆ ಇದೆ. ಮುಂಬರ...